HomeLatest NewsSHOCKING: ಬಾಯಿಗೆ ಬಟ್ಟೆ ತುರುಕಿ, ಕೈ -ಕಾಲು ಕಟ್ಟಿ ಕತ್ತು ಸೀಳಿ ತಾಯಿಯನ್ನೇ ಭೀಕರವಾಗಿ ಹತ್ಯೆಗೈದ...

SHOCKING: ಬಾಯಿಗೆ ಬಟ್ಟೆ ತುರುಕಿ, ಕೈ -ಕಾಲು ಕಟ್ಟಿ ಕತ್ತು ಸೀಳಿ ತಾಯಿಯನ್ನೇ ಭೀಕರವಾಗಿ ಹತ್ಯೆಗೈದ ಪುತ್ರ

ಬಾಗಲಕೋಟೆ: ಮದ್ಯ ಸೇವನೆಗೆ ಹಣ ಕೊಡದ ಕಾರಣಕ್ಕೆ ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ.

28 ವರ್ಷದ ವೆಂಕಟೇಶ್ ಗಿರಿಸಾಗರ ಎಂಬಾತ ತನ್ನ 58 ವರ್ಷದ ತಾಯಿ ಶಾವಕ್ಕ ಗಿರಿಸಾಗರ ಅವರ ಕೈಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ, ಕುತ್ತಿಗೆ ಕೊಯ್ದು ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ. ಶಾವಕ್ಕ ಮನೆಯಲ್ಲಿ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ಶಾವಕ್ಕ ಅವರ ಪತಿ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಮಗಳನ್ನು ಮದುವೆ ಮಾಡಿ ಬೇರೆ ಊರಿಗೆ ಕೊಡಲಾಗಿತ್ತು. ಬಾಡಿಗೆ ಮನೆಯಲ್ಲಿ ವೆಂಕಟೇಶ್ ಮತ್ತು ಶಾವಕ್ಕ ವಾಸವಾಗಿದ್ದರು. ಯಾವುದೇ ಕೆಲಸ ಮಾಡದೆ ಕುಡಿತದ ಚಟ ರೂಢಿಸಿಕೊಂಡಿದ್ದ ವೆಂಕಟೇಶ್ ತಾಯಿ ಕೂಲಿ ಮಾಡಿದ ಹಣವನ್ನು ಪಡೆದು ದಿನ ಕುಡಿದು ಬಂದು ಜಗಳವಾಡುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುವಾರ ಕೂಡ ಹಣಕ್ಕಾಗಿ ಪೀಡಿಸಿದ್ದು, ಹಣಕೊಡಲು ನಿರಾಕರಿಸಿದಾಗ ಕೈಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ, ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸಂಜೆಯಾದರೂ ಶಾವಕ್ಕ ಕಾಣಿಸದಿದ್ದಾಗ ಅಕ್ಕಪಕ್ಕದವರು ಇಣುಕಿ ನೋಡಿದ್ದಾರೆ. ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದು ಗೊತ್ತಾಗಿದೆ. ಕೂಡಲೇ ಕಲಾದಗಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತಾಯಿಯನ್ನು ಕೊಂದು ಗದ್ದನಕೇರಿ ಕ್ರಾಸ್ ನ ಬಾರ್ ನಲ್ಲಿ ಕುಡಿಯುತ್ತ ಕುಳಿತಿದ್ದ ವೆಂಕಟೇಶನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular