ಚಂಡೀಗಢ: ಲಂಚ ಪಡೆದ ಆರೋಪದಲ್ಲಿ ಪಂಜಾಬ್ ಡಿಐಜಿ ಹರ್ ಚರಣ್ ಸಿಂಗ್ ಬುಲ್ಲಾ ಅವರನ್ನು ಬಂಧಿಸಲಾಗಿದೆ. 8 ಲಕ್ಷ ಲಂಚ ಪಡೆಯುತ್ತ್ದ್ದ ವೇಳೆ ಹಿರಿಯ ಐಪಿಎಸ್ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸಿಬಿಐ ಅಧಿಕಾರಿಗಳಿ ಡಿಐಜಿ ಹರ್ ಚರಣ್ ಸಿಂಗ್ ಅವರನ್ನು ಬಂಧಿಸಿದ್ದು, ಅವರ ಮನೆ ಮೇಲೆ ದಾಳಿ ನಡೆಸಿದ ವೇಳೆ 5 ಕೋಟಿ ನಗದು ಹಣ, ಕೆಜಿಗಟ್ಟಲೇ ಚಿನ್ನಾಭರಣ, ವಜ್ರ, ಮರ್ಸಿಡಿಸ್, ಆಡಿ ಕಾರುಗಳು ಸೇರಿದಂತೆ ದುಬಾರಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಹರ್ ಚರಣ್ ಸಿಂಗ್ ಪಂಜಾ ನ ರೋಪರ್ ವಲಯದಲ್ಲಿ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 8 ಲಕ್ಷ ಲಂಚ ಪಡದ ಆರೋಪದಲ್ಲಿ ಸಿಬಿಐ ಬಲೆಗೆ ಬಿದ್ದಿದ್ದಾರೆ. ಇವರ ಜೊತೆಗೆ ಮಧ್ಯವರ್ತಿ ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ ಆಕಾಶ್ ಬಟ್ಟಾ ಎಂಬ ಸ್ಕ್ರ್ಯಾಪ್ ವ್ಯಾಅಪಾರಿ ವಿರುದ್ಧ ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಮಧ್ಯವರ್ತಿ ಮೂಲಕ ಲಂಚ ಪಡೆಯುತ್ತಿದ್ದರು ಈ ವೇಳೆ ಅಧಿಕಾರಿಯನ್ನು ಬಂಧಿಸಲಾಗಿದೆ. ಲಂಚ ಕೊಡದಿದ್ದರೆ ಉದ್ಯಮಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಇದರಿಂದ ನೊಂದ ವ್ಯಾಪಾರಿ ಸಿಬಿಐಗೆ ದೂರು ನೀಡಿದ್ದರು.