ಉಡುಪಿ: ಲಾರಿ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಬೈಪಾಸ್ ಬಳಿ ನಡೆದಿದೆ.
ರಫಿಕ್ (37) ಮೃತ ದುರ್ದೈವಿ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ. ಇಂದು ಬೆಳಿಗ್ಗೆ ಮನೆಯಿಂದ ಮಸೀದ್ಗೆ ತೆರಳುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಫೀಕ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.