ಕೋಲಾರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಕೋಲಾರ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟ ಬಂದ್ ಗೆ ಕರೆ ನೀಡಿದ್ದು, ಇಂದು ಕೋಲಾರ ಜಿಲ್ಲೆ ಸಂಪೂರ್ಣ ಬಂದ್ ಆಗಿದೆ.
ಜಿಲ್ಲಾ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅಂಗಡಿ, ಮುಂಗಟ್ಟು, ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಸಾರಿಗೆ ಬಸ್ ಸಂಚಾರ, ವಾಹನ ಸಂಚಾರ ಕೂಡ ಸ್ಥಗಿತಗೊಂಡಿದೆ.
ಇಂಗು ಬೆಳಿಗ್ಗೆ 6 ಗಂಟೆಯಿಂದಲೇ ಜಿಲ್ಲಾ ಬಂದ್ ಆರಂಭವಾಗಿದ್ದು, ಕೆಜಿಎಫ್, ಮುಳಬಾಗಿಲು, ಬಂಗಾರಪೇಟೆ, ಶ್ರೀನಿವಾಸಪುಅರ, ಮಾಲೂರು ಹಾಗೂ ಕೋಲಾರ ತಾಲೂಕುಗಳಲ್ಲಿ ಸಾರ್ವಜನಿಕರು ಸ್ವಯಂ ಪ್ರೇತಿತರಾಗಿ ಬಂದ್ ಗೆ ಬೆಂಬಲ ನೀಡಿದ್ದಾರೆ. ಸಂಜೆ 6 ಗಂಟೆಯವರೆಗೂ ಜಿಲ್ಲೆಯಲ್ಲಿ ಬಂದ್ ಇರಲಿದೆ.