ಬೆಂಗಳೂರು: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಇಂದು ಜೀವನದಿ ಕಾವೇರಿ ತೀರ್ಥೋದ್ಭವ. ಪ್ರವಿತ್ರ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ತಲಕಾವೇರಿಗೆ ಆಗಮಿಸುತ್ತಿದ್ದಾರೆ. ಈ ನಡುವೆ ತಲಕಾವೇರಿಗೆ ತೆರಳಬೇಕಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರವಾಸ ರದ್ದಾಗಿದೆ.
ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿಗೆ ಭೇಟಿ ನೀಡಬೇಕಿತ್ತು. ಆದರೆ ಭಾಗಮಂಡಲದಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದು ಮಾಡಿದ್ದಾರೆ.
ಭಾಗಮಂಡಲ ವ್ಯಾಪ್ತಿಯಲ್ಲಿ ಮಂಜು, ಮೋಡಕವಿದ ವಾತಾವರಣವಿದ್ದು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.