BREAKING: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಗುತ್ತಿಗೆದಾರರು: ಬಾಕಿ ಹಣ 1 ತಿಂಗಳಲ್ಲಿ ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರ ಸಂಘ ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದೆ. ಗುತ್ತಿಗೆದಾರರ ಬಾಕಿ ಹಣ ಪಾವತಿ ಮಾಡುವಂತೆ ಹಾಗೂ ವಿವಿಧ ಬೇದಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಜಾಸ್ತಿಯಾಗಿದೆ. 60ರಿಂದ 80 ಪರ್ಸೆಂಟ್ ಕಮಿಷನ್ ಅಂತಾ ನಾವು ಹೇಳಿಲ್ಲ. ಆದರೆ ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸದೇ ಕಮಿಷನ್ ಕೇಳುತ್ತಿದ್ದಾರೆ ಎಂದರು.

52 ಸಾವಿರ ಕೋಟಿ ರೂಪಾಯಿ ಬಾಕಿ ಬಿಡುಗಡೆ ಮಾಡಬೇಕಿತ್ತು. ಕೆಲ ಇಲಾಖೆಗಳು ಹಣ ಬಿಡುಗಡೆ ಮಾಡಿದ್ದು, 33 ಸಾವಿರ ಕೋಟಿ ರೂಪಾಯ್ ಬಾಕಿ ಇದೆ. ಇನ್ನೊಂದು ತಿಂಗಳು ಕಾಯುತ್ತೇವೆ. ಒಂದು ತಿಂಗಳ ಒಳಗಾಗಿ ಹಣ ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read