HomeLatest NewsBREAKING : ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ 'ಯುವನಿಧಿ' ಸ್ಥಗಿತ  : CM...

BREAKING : ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ‘ಯುವನಿಧಿ’ ಸ್ಥಗಿತ  : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಇಂದು ಮೈಸೂರಿನಲ್ಲಿ ಆಯೋಜಿಸಿದ್ದ “ಬೃಹತ್ ಉದ್ಯೋಗ ಮೇಳ ಹಾಗೂ ಯುವ ಸಮೃದ್ಧಿ ಸಮ್ಮೇಳನ”ವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮದು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸುತ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು.

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ನರೇಂದ್ರ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷಕ್ಕೆ ಒಟ್ಟು 22 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58,892 ಮಂದಿ ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11,507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22,819 ಅಭ್ಯರ್ಥಿಗಳ ಹೆಸರನ್ನು ಅಂತಿಮ ಹಂತಕ್ಕೆ ಆಯ್ಕೆ ಮಾಡಲಾಗಿದೆ.

ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1,20,563 ಅಭ್ಯರ್ಥಿಗಳು ಭಾಗವಹಿಸಿ, 24,391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48,232 ಅಭ್ಯರ್ಥಿಗಳ ಹೆಸರನ್ನು ಅಂತಿಮ ಸುತ್ತಿಗೆ ಮಾಡಲಾಗಿದೆ.

ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28,000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ. ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular