BIG NEWS: ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ತಿಂಗಳಲ್ಲಿ 979 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಇದು ಕಾನೂನು ಅವ್ಯವಸ್ಥೆಯನ್ನು ತೋರಿಸುತ್ತಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ವಿಪಕ್ಷ ಅನಯಕ ಆರ್.ಅಶೋಕ್ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯಾದ್ಯಂತ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರರ ಮೇಲಿನ ಅಪರಾಧಗಳು ಹೆಚ್ಚಳವಾಗುತ್ತಿವೆ. ಕರ್ನಾಟಕದಲ್ಲಿ ಕಳೆದ ನಾಲ್ಕು ತಿಗಳಲ್ಲಿ 979 ಲೈಂಗಿಕ ದೌರ್ಜನ್ಯ ಹಾಗೂ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಬೆಂಗಳೂರಿನಲ್ಲಿಯೇ 114ಗೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಮೈಸೂರಿನಲ್ಲಿ ದಸರಾದಲ್ಲಿ ಬಲೂನು ಮಾರಲು ಬಂದಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ಮಹಿಳಾ ಗ್ರಂಥಪಾಲಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ಘಟನೆಗಳು ನೈತಿಕ ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಪ್ರತಿನಿಧಿಸುತ್ತವೆ. ಇಂತಹ ದೌರ್ಜನ್ಯಗಳ ಬಗ್ಗೆ ಸರ್ಕಾರದ ಮೌನ, ನಿಷ್ಕ್ರಿಯತೆ ಸರಿಯಲ್ಲ. ಇಂತಹ ಸಂದರ್ಭಗಳಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ತಕ್ಷಣ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read