HomeLatest Newsನ.2 ರಂದು ಬಳ್ಳಾರಿ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ

ನ.2 ರಂದು ಬಳ್ಳಾರಿ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ : ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನ.02 ರಂದು ಸಂಘದ ಕಚೇರಿಯಲ್ಲಿ ಸಾಮಾನ್ಯ ಚುನಾವಣೆ ಜರುಗಲಿದೆ ಎಂದು ಗ್ರಾಹಕರ ಸಹಕಾರ ಸಂಘ ನಿಯಮಿತ ಅಲ್ಲಿಪುರ ಹಾಗೂ ಬಳ್ಳಾರಿ ಉಪವಿಭಾಗದ ದ್ವಿ.ದ.ಸ, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ರಿಟರ್ನಿಂಗ್ ಅಧಿಕಾರಿ ತಿಳಿಸಿದ್ದಾರೆ.

ಅ.18 ರಿಂದ ಬೆಳಿಗ್ಗೆ 11 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಅ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ.

ಅ.26 ರಂದು ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸಲ್ಲಿಸಿದ ನಾಮಪತ್ರ ಹಿಂಪಡೆಯಲು ಅ.27 ರಂದು ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ಸದಸ್ಯರು ಚುನಾವಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular