ಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ಶಿಬಿರದ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪಾಕಿಸ್ತಾನದ 7 ಸೈನಿಕರು ಮೃತಪಟ್ಟಿದ್ದಾರೆ.
ಅಪ್ಘಾನ್ ಗಡಿ ಬಳಿಯ ವಜೀರಿಸ್ತಾನದ ಮಿರ್ ಅಲಿಯಲ್ಲಿರುವ ಭದ್ರತಾ ಪಡೆಗಳ ಶಿಬಿರದ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ತೆಹರಿಕ್-ಇ-ತಾಲಿಬಾನ್ ಪಾಕಿಸ್ತಾನ್ ಗೆ ಸಂಬಂಧಿಸಿದ ಆತ್ಮಹತ್ಯಾ ಕಾರ್ ಬಾಂಬರ್ ಮಿಲ್ ಅಲಿಯಲ್ಲಿರುವ ಭದ್ರತಾ ಪಡೆಗಳ ಶಿಬಿರದ ಕಾಂಪೌಂಡ್ ಗೆ ಕಾರಿ ಡಿಕ್ಕಿ ಹೊಡೆಸಿದ್ದು, ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿನ್ 7 ಪಾಕಿಸ್ತಾನಿ ಸೈನಿಕರು . ಹತಾಅಗಿದ್ದಾರೆ.
ಸುತ್ತಮುತ್ತಲಿನ ಮನೆಗಳಿಗೂ ಹಾನಿಯಾಗಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಕೊಲ್ಲಲಾಗಿದೆ.