ರಾಯಚೂರು: ಆರ್.ಎಸ್.ಎಸ್. ಪಥ ಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ಇತ್ತೀಚೆಗೆ ನಡೆದ ಆರ್.ಎಸ್.ಎಸ್. ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಒ ಮತ್ತು ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಪ್ರವೀಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಆರ್.ಎಸ್.ಎಸ್. ಶತಮಾನೋತ್ಸವ ಅಂಗವಾಗಿ ನಡೆದ ಪಥ ಸಂಚಲನದಲ್ಲಿ ಪ್ರವೀಣ್ ಕುಮಾರ್ ಗಣವೇಶಧಾರಿಯಾಗಿ ಕೈಯಲ್ಲಿ ದೊಣ್ಣೆ ಹಿಡಿದು ಭಾಗವಹಿಸಿದ್ದರು.. ಕರ್ನಾಟಕ ಸಿವಿಲ್ ಸೇವಾ ನಿಯಮ ಅನ್ವಯ ವಿಚಾರಣೆ ಕಾಯ್ದಿರಿಸಿ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ವಿಚಾರಣೆಯನ್ನು ಕಾಯ್ದಿರಿಸಿ ಪಂಚಾಯತ್ ರಾಜ್ ಇಲಾಖೆ ಆಯುಕ್ತರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರ ಡಾ. ಅರುಂಧತಿ ಚಂದ್ರಶೇಖರ ಅವರು ಆದೇಶ ಹೊರಡಿಸಿದ್ದಾರೆ.
