ಶಿವಮೊಗ್ಗ: ಆರ್.ಎಸ್.ಎಸ್. ವಿರುದ್ಧ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಆರ್.ಎಸ್.ಎಸ್. ಗಣವೇಶಧಾರಿ ಪ್ರತಿಕೃತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಕಚೇರಿ ಎದುರಲ್ಲಿ ಗಣವೇಶಧಾರಿ ಪ್ರತಿಕೃತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಕೃತಿ ವಶಕ್ಕೆ ಪಡೆದು ಪೊಲೀಸರು ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ.
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದನ್ನು ಕಾರ್ಯಕರ್ತರು ಖಂಡಿಸಿದ್ದು, ಆರ್.ಎಸ್.ಎಸ್. ವಿರುದ್ಧ ಘೋಷಣೆ ಕೂಗಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಪ್ರಕರಣವನ್ನು ಉನ್ನತಮಟ್ಟದ ತನಿಖೆ ನಡೆಸಲು ಆಗ್ರಹಿಸಿದ್ದಾರೆ.