ಹಾಸನ: ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಜಿಲ್ಲಾಡಳಿತ ಈ ಬಾರಿ ಶಿಸ್ತು ಬದ್ಧವಾಗಿ ಉತ್ತಮ ವ್ಯವಸ್ಥೆ ಮಾಡಿದ್ದಾರೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾದ ಹೆಚ್.ಡಿ. ಕುಮಾರ ಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಂಟುಬ ಸಮೇತರಾಗಿ ಆಗಮಿಸಿ ಹಾಸನಾಂಬ ದೇವಿ ಹಾಗೂ ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದು ನಂತರ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ದೇವಸ್ಥಾನದ ಆಡಳಿತ ವರ್ಗ, ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ಅತ್ಯಂತ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದಾರೆ ಎಂದರು.
ನಾಡಿನ ಲಕ್ಷಾಂತರ ಜನ ದೇವಿ ದರ್ಶನಕ್ಕೆ ಆಗಮಿಸುತ್ತಿದ್ದು, ಭಕ್ತಾಧಿಗಳಿಗೆ ಯಾವುದೇ ಅಸಹನೆಗೆ ಅವಕಾಶವಿಲ್ಲದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ತಾಯಿ ದರ್ಶನಕ್ಕೆ ಉತ್ತಮವಾಗಿ ವ್ಯವಸ್ಥೆ ಮಾಡಿರುವ ಜಿಲ್ಲಾಡಳಿತಕ್ಕೆ ಧನ್ಯವಾದಗಳು. ಎಲ್ಲರಿಗೂ ಒಳಿತಾಗುವಂತೆ ತಾಯಿ ಆಶೀರ್ವಾದ ಮಾಡಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.
ಈ ವೇಳೆಯಲ್ಲಿ ಶಾಸಕರಾದ ಶಾರದಾ ಪೂರ್ಯಾನಾಯ್ಕ್, ಸಿ.ಎನ್. ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.