ಚಾಮರಾಜನಗರ : ಗ್ರಾಮ ಪಂಚಾಯತ್ ಆವರಣದಲ್ಲೇ ವಾಟರ್ ಮ್ಯಾನ್ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 27 ತಿಂಗಳಿನಿಂದ ಸಂಬಳ ಸಿಕ್ಕಿಲ್ಲ ಎಂದು ಆರೋಪಿಸಿ ನೀರುಗಂಟಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಚಾಮರಾಜನಗರ ಹೊಂಗನೂರಿನಲ್ಲಿ ಈ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಗ್ರಾಮ ಪಂಚಾಯತ್ ಗೋಡೆಗೆ ಅಂಟಿಸಿಟ್ಟು ಕಿಟಕಿಗೆ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ .ಆತ್ಮಹತ್ಯೆ ಮಾಡಿಕೊಂಡವರನ್ನು ಚಿಕ್ಕೂಸನಾಯಕ (60) ಎಂದು ಗುರುತಿಸಲಾಗಿದೆ.
ವೇತನ ನೀಡದೇ ನನಗೆ ರಜೆ ಕೊಡದೇ ಸತಾಯಿಸಿದ್ದಾರೆ. ವೇತನಕ್ಕೆ ಪಿಡಿಒ ರಾಮೇಗೌಡ ಸಹಿ ಹಾಕಿದರೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸಹಿ ಮಾಡುತ್ತಿರಲಿಲ್ಲ. ನನ್ನ ಸಾವಿಗೆ ಪಿಡಿಒ ರಾಮೇಗೌಡ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ಪತಿ ಮೋಹನ್ ಕಾರಣ ಎಂದು ಬರೆದಿಟ್ಟಿದ್ದಾರೆ. ಸದ್ಯ ಪಿಡಿಒ ಕೆ ಎನ್ ರಾಮೇಗೌಡ ಅವರನ್ನು ಅಮಾನತು ಮಾಡಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್ ಆದೇಶ ಹೊರಡಿಸಿದ್ದಾರೆ.