ಬೆಂಗಳೂರು : ನಟ ಡಾರ್ಲಿಂಗ್ ಕೃಷ್ಣ ಅಭಿನಯದ , ಶಶಾಂಕ್ ನಿರ್ದೇಶನದ ಬ್ರ್ಯಾಟ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ.
ಕಿಚ್ಚ ಸುದೀಪ್ ಅವರು ಈ ಚಿತ್ರಕ್ಕೆ ಸಾಥ್ ನೀಡಿದ್ದು, ಸಿನಿಮಾದ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಜೊತೆ ತಂದೆ-ಮಗನ ಸೆಂಟಿಮೆಂಟ್ ಈ ಚಿತ್ರದಲ್ಲಿದೆ. ಮನಿಷಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದು,ಅಚ್ಯುತ್ ಕುಮಾರ್, ರಮೇಶ್ ಇಂದಿರಾ ಮತ್ತಿತರರು ನಟಿಸಿದ್ದಾರೆ. ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದ್ದು. ಅ.31 ರಂದು ತೆರೆಗೆ ಬರುತ್ತಿದೆ.