ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕೈ ಕಾರ್ಯಕರ್ತನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ –ನೂಕಾಟ ನಡೆದಿದೆ .
ಹುಬ್ಬಳ್ಳಿ ನಗರದ ಕೋಟಿಲಿಂಗೇಶ್ವರದಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್ ಎಸ್ ಎಸ್ ಸಮಾಜದಲ್ಲಿ ದ್ವೇಷವನ್ನು ಬಿತ್ತುತ್ತಿದೆ, ಅದನ್ನು ನಿಷೇಧ ಮಾಡಬೇಕು . ಹಾಗೂ ಆರ್ ಎಸ್ ಎಸ್ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿದೆ, ಇದು ಖಂಡನೀಯ. ಕೂಡಲೇ ಆರ್ ಎಸ್ ಎಸ್ ಸಂಘಟನೆ ನಿಷೇಧಿಸಿ ಎಂದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.