ಬೆಂಗಳೂರು : ಬೆಂಗಳೂರಿನ ಪಿಜಿಯಲ್ಲಿ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಂಗಳೂರಿನ ಬಾಗಲೂರಿನಲ್ಲಿ ಈ ಘಟನೆ ನಡೆದಿದೆ. ಅ.17 ರಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸನಾ ಪರ್ವಿನ್ ಎಂಬ ವಿದ್ಯಾರ್ಥಿನಿ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನಾ ಓದುತ್ತಿದ್ದ ಕಾಲೇಜಿನ ಪಾಸ್ ಔಟ್ ವಿದ್ಯಾರ್ಥಿ ನೀಡಿದ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದಾಳೆ ಎಂದು ಸನಾ ಪೋಷಕರು ಆರೋಪಿಸಿದ್ದಾರೆ. ಆದರೆ ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಿದೆ.