ಕಲಬುರಗಿ : ಪ್ರತಿಯೊಬ್ಬರೂ ಒಂದು ಮರವನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು. ಪರಿಸರ ರಕ್ಷಣೆ ಸರ್ಕಾರದಷ್ಟೇ ನಾಗರಿಕರ ಜವಾಬ್ದಾರಿಯೂ ಆಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಇಂದು ಕಲಬುರಗಿಯಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಭವಿಷ್ಯದ ಪೀಳಿಗೆಗಾಗಿ ಹಸಿರುಕರಣಕ್ಕೆ ಆದ್ಯತೆ ನೀಡುವುದು ಕಾಲದ ಅಗತ್ಯ. “ಊರಿಗೊಂದು ಕೆರೆ – ಮನೆಗೊಂದು ಮರ” ಎಂಬ ಪರಿಕಲ್ಪನೆಯನ್ನು ಅಳವಡಿಸಿಕೊಂಡು ಪ್ರತಿಯೊಬ್ಬರೂ ಒಂದು ಮರವನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು. ಪರಿಸರ ರಕ್ಷಣೆ ಸರ್ಕಾರದಷ್ಟೇ ನಾಗರಿಕರ ಜವಾಬ್ದಾರಿಯೂ ಆಗಿದೆ.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪರಿಸರ ಸಂರಕ್ಷಣೆಗೆ ನೀಡಿದ ಮಹತ್ವದ ಕೊಡುಗೆಯನ್ನು ಸ್ಮರಿಸಿದೆ. 1972ರಲ್ಲಿ ವನ್ಯಜೀವಿ ಕಾಯಿದೆ, 1974ರಲ್ಲಿ ಜಲ ಕಾಯಿದೆ, 1980ರಲ್ಲಿ ಅರಣ್ಯ ಕಾಯಿದೆ ಹಾಗೂ 1981ರಲ್ಲಿ ವಾಯು ಮಾಲಿನ್ಯ ನಿಯಂತ್ರಣ ಕಾಯಿದೆಗಳನ್ನು ಜಾರಿಗೆ ತಂದದ್ದು ಅವರ ದೃಷ್ಟಿಕೋನದ ಪ್ರತೀಕವಾಗಿದೆ. ರಾಜ್ಯದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸುಮಾರು 21% ಅರಣ್ಯ ವಿಸ್ತೀರ್ಣ, 6395 ಆನೆಗಳು ಮತ್ತು 560 ಹುಲಿಗಳು ನಮ್ಮ ನೈಸರ್ಗಿಕ ಸಂಪತ್ತಿನ ಸಮೃದ್ಧತೆಯನ್ನು ತೋರಿಸುತ್ತವೆ ಎಂದಿದ್ದಾರೆ.