ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಇದೇ ಮೊದಲಬಾರಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.
ತಮ್ಮ ಆಪ್ತರ ಜೊತೆ ಹಾಸನಾಂಬ ದೇವಸ್ಥಾನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಹಾಸನಾಂಬ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದೇಶ್ವರಸ್ವಾಮಿ ದರ್ಶನ ಪಡೆದರು.
ಹಾಸನಾಂಬಾ ದೇವಿ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಹರಿದು ಬರುತ್ತಿದ್ದು, ಕಿಲೋ ಮೀಟರ್ ಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.