ಹಾವೇರಿ: 12 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ತಹಶಿಲ್ದಾರ್ ಕಚೇರಿಯ ಶಿರಸ್ತೆದಾರ್ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ.
ಆರ್ ಟಿಸಿ ದುರಸ್ಥಿ ಮಾಡಿಕೊಡಲು 12 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಾನಗಲ್ ತಹಶಿಲ್ದಾರ್ ಕಚೇರಿಯ ಶಿರಸ್ತೆದಾರ್ ತಮ್ಮಣ್ಣ ಕಾಂಬಳೆ, ದ್ವಿತೀಯ ದರ್ಜೆ ಸಹಾಯಕರಾದ ಗೋಳಪ್ಪ ಮನಗೂಳಿ, ಶಿವಾನಂದ ಬಡಿಗೇರ ಬಂಧಿತರು.
ಬೊಮ್ಮನಹಳ್ಳಿ ಗ್ರಾಮದ ಶಂಕ್ರಪ್ಪ ಅವರು ಸಲ್ಲಿಸಿದ್ದ ಆರ್ ಟಿಸಿ ದುರಸ್ತಿ ಅರ್ಜಿ ಪ್ರಕ್ರಿಯೆಗೆ ಮೂವರು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.