ಉಡುಪಿ: ಪಿಕಪ್ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.
ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್ (49) ಮೃತ ದುರ್ದೈವಿ. ಮಲ್ಪೆಯಿಂದ ಶಿರೂರು ಮಾರ್ಕೆಟ್ ಕಡೆ ತೆರಳುತ್ತಿದ್ದ ಪಿಕಪ್ ವಾಹನ ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.