ಮೈಸೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಬದನಾಳು ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಹೊಸಕೆರೆಯಲ್ಲಿ ಈ ದುರಂತ ಸಂಭವಿಸಿದೆ. ಬದನಾಳು ಗ್ರಾಮದ ಚಂದನ್ (8) ಹಾಗೂ ಆರ್ಯ (10) ಮೃತ ಬಾಲಕರು. ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಕೆರೆ ಬಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಬದನಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.