ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಕುಸಿತವಾಗಿದ್ದು, ಇದರಿಂದಾಗಿ ಬೆಳೆಗಾರರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರ ಘೋಷಣೆ ಮಾಡಿದ ಬೆಂಬಲ ಬೆಲೆಗಿಂತಲೂ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಪಾತಾಳಕ್ಕೆ ಕುಸಿದಿದೆ.
ಇಷ್ಟಾದರೂ ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯದಿರುವುದು ಸಂಕಷ್ಟ ತಂದಿದೆ. ಕೇಂದ್ರ ಸರ್ಕಾರ ಪ್ರಸಕ್ತ ವರ್ಷದಲ್ಲಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳಕ್ಕೆ 2400 ರೂ. ಘೋಷಣೆ ಮಾಡಿದೆ. ಇಷ್ಟು ದರಕ್ಕೆ ಮಾರುಕಟ್ಟೆ ಸಿಕ್ಕರೆ ರೈತರಿಗೆ ಅನುಕೂಲವಾಗುತ್ತದೆ.
ಮಾರುಕಟ್ಟೆಯಲ್ಲಿ ಆವಕ ಹೆಚ್ಚಳವಾಗಿದ್ದರಿಂದ ದಲ್ಲಾಳಿಗಳು, ಮಧ್ಯವರ್ತಿಗಳು ಮೆಕ್ಕೆಜೋಳ ಬೆಲೆ ಇಳಿಕೆ ಮಾಡಿದ್ದಾರೆ. ಇದರಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಕೊಪ್ಪಳ ಮಾರುಕಟ್ಟೆಯಲ್ಲಿ ಒಂದು ಲಕ್ಷ ಕ್ವಿಂಟಾಲ್ ಗೂ ಅಧಿಕ ಮೆಕ್ಕೆಜೋಳ ಆವಕವಾಗಿದೆ. ಇದರಿಂದ ದರ ಕುಸಿದಿದೆ. ಇಷ್ಟು ಕಡಿಮೆ ದರಕ್ಕೆ ಮಾರಾಟ ಮಾಡಿದರೆ ರೈತರು ಖರ್ಚು ಮಾಡಿದ ಹಣ ಕೂಡ ಬರುವುದಿಲ್ಲ. ಹೀಗಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕೆಂದು ಒತ್ತಾಯಿಸಲಾಗಿದೆ.