ಬೆಂಗಳೂರು: 18,000 ಶಿಕ್ಷಕರ ನೇಮಕಾತಿಗೆ ಮುಂದಾಗಿರುವ ರಾಜ್ಯ ಸರ್ಕಾರ ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಿಗದಿಪಡಿಸಿದೆ.
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಈ ಬಗ್ಗೆ ಆಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 9 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 7ರಂದು ಬೆಳಗ್ಗೆ ಪತ್ರಿಕೆ -1(ಒಂದರಿಂದ ಐದನೇ ತರಗತಿ) ಮತ್ತು ಮಧ್ಯಾಹ್ನ ಪತ್ರಿಕೆ -2(ಆರರಿಂದ ಎಂಟನೇ ತರಗತಿ) ಪರೀಕ್ಷೆ ನಡೆಯಲಿದೆ.
ಸಾಮಾನ್ಯವಾಗಿ ವರ್ಗ ಮತ್ತು ಒಬಿಸಿಗೆ ಪರೀಕ್ಷೆ -1 ಅಥವಾ ಪರೀಕ್ಷೆ- 2 ಬರೆಯಲು ರೂ.700 ಶುಲ್ಕ ನಿಗದಿ ಮಾಡಲಾಗಿದೆ. ಎರಡೂ ಪರೀಕ್ಷೆ ಬರೆಯುವವರಿಗೆ ಒಂದು ಸಾವಿರ ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ ಅಭ್ಯರ್ಥಿಗಳಿಗೆ ರೂ.350 ನಿಗದಿಪಡಿಸಿದ್ದು, ಎರಡು ಪರೀಕ್ಷೆಗೆ 500 ರೂಪಾಯಿ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಫಲಿತಾಂಶ ಪ್ರಕಟಿಸಲಾಗುವುದು. ಆಫ್ಲೈನ್ ನಲ್ಲಿಯೇ ಪರೀಕ್ಷೆ ನಡೆಯಲಿದೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಬಡ್ತಿ ಪಡೆಯಲು ಶಿಕ್ಷಕರ ಅರ್ಹತಾ ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.