ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್.ಎಸ್.ಎಸ್ ಆಯೋಜಿಸಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿ ಜಿಲ್ಲಾಡಳಿತ ಹಾಗೂ ತಹಶಿಲ್ದಾರ್ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿ ತುರ್ತು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್, ಅರ್ಜಿ ದಾರರಿಗೆ ಹೊಸದಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿದೆ.
ಆರ್.ಎಸ್.ಎಸ್ ಹಾಗೂ ಭೀಮ್ ಆರ್ಮಿ ಎರಡೂ ಸಂಘಟನೆಗಳಿಂದ ಪಥಸಂಚನವಿದೆ. ಹಾಗಾಗಿ ಎರಡೂ ಸಂಘಟನೆಗಳು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಪ್ರತ್ಯೇಕ ಅರ್ಜಿ ಸಲ್ಲಿಸಿ. ಬಳಿಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಆದೇಶ ಏನಿರಲಿದೆ ಎಂಬ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡಿ ಎಂದು ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ನವೆಂಬರ್ 2ರಂದು ಪಥಸಂಚಲನ ನಡೆಸಲು ಆರ್.ಎಸ್.ಎಸ್ ತೀರ್ಮಾನಿಸಿದೆ. ವರದಿ ಬಂದ ಬಳಿಕ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 24ರಂದು ನಡೆಸಲಾಗುವುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.