ಬೆಂಗಳೂರು: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಮೂಲಕ ಮನೆ ಯಜಮಾನಿಯರ ಖಾತೆಗೆ ಮಾಸಿಕ 2 ಸಾವಿರ ರೂ. ಜಮಾ ಮಾಡಲಾಗುತ್ತಿದೆ.
ಈ ಯೋಜನೆಯ ಮುಂದುವರೆದ ಭಾಗವಾಗಿ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿಯೇ ಸಹಕಾರ ಸಂಘ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅನುಮತಿ ನೀಡಲಾಗಿದೆ. ಷೇರು ಸಂಗ್ರಹಣೆಗೆ ಸಹಕಾರ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿಯೇ ಸಹಕಾರ ಸಂಘವನ್ನು ಸ್ಥಾಪಿಸಲಾಗುವುದು. ರಾಜ್ಯ ಸರ್ಕಾರ ಸಹಕಾರ ಸಂಘ ಸ್ಥಾಪನೆಗೆ ಮುಂದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸ್ವಯಂ ಉದ್ಯಮಿಗಳನ್ನಾಗಿ ಮಾಡಿ ಸ್ವಾವಲಂಬನೆ ಸಾಧಿಸುವಂತೆ ಮಾಡಲು ರಾಜ್ಯ ಸರ್ಕಾರ ಸಹಕಾರ ಸಂಘ ಸ್ಥಾಪನೆಯ ಮಹತ್ವದ ಹೆಜ್ಜೆ ಇಟ್ಟಿದೆ.
ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ಪಡೆಯುತ್ತಿದ್ದು, ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಸ್ವಂತ ಉದ್ಯಮ ಆರಂಭಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.
ಅವರಿಗೆ ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ.