ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಇದೀಗ ಸೇಡಂನಲ್ಲಿಯೂ ಆರ್.ಎಸ್.ಎಸ್ ಪಥಸಂಚನಕ್ಕೆ ಬ್ರೇಕ್ ಬಿದ್ದಿದೆ.
ಕೊನೇ ಕ್ಷಣದಲ್ಲಿ ಸೇಡಂನಲ್ಲಿ ನಡೆಯಬೇಕಿದ್ದ ಪಥಸಂಚನಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೇಡಂ ತಹಶಿಲ್ದಾರ್ ಶ್ರೀಯಾಂಕಾ ಆರ್.ಎಸ್.ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿ, ಆದೇಶ ಹೊರಡಿಸಿದ್ದಾರೆ. ಸೇಡಂ ಕ್ಷೇತ್ರ ಸಚಿವ ಶರಣಪ್ರಕಾಸ್ ಪಾಟೀಲ್ ಕ್ಷೇತ್ರವಾಗಿದೆ.
ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಅಕ್ಟೋಬರ್ 24ಕ್ಕೆ ಮುಂದೂಡಲಾಗಿದೆ. ಈ ನಡುವೆ ಆರ್.ಎಸ್.ಎಸ್ ಪಥಸಂಚನಕ್ಕೆ ಸಿದ್ಧತೆ ನಡೆಸಿದ್ದ ಇನ್ನಷ್ಟು ಕ್ಷೇತ್ರಗಳಲ್ಲಿ ಕುದ ಅನುಮತಿ ನಿರಾಕರಿಸಲಾಗಿದೆ.