ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿಯಲ್ಲಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಸವರಾಜ್(34) ಬಂಧಿತ ಆರೋಪಿ. ಪೊಲೀಸರು ಆರೋಪಿ ಬಂಧಿಸಿ 35 ಸಾವಿರ ರೂಪಾಯಿ ಮೌಲ್ಯದ 13 ಕೆಜಿಯ 28 ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ,
ಡಿವೈಎಸ್ಪಿ ಕೇಶವ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಆರ್.ಆರ್. ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.