ಶಿವಮೊಗ್ಗ: ಬಿಹಾರ ಚುನಾವಣೆ ಹೆಸರಲ್ಲಿ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಸಚಿವ ಸಂಪುಟದ ಸಚಿವರು ಬಿಹಾರ ಚುನಾವಣೆಗೆ ಫಂಡ್ ಕಳುಹಿಸಲು ಅಧಿಕಾರಿಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ. ಸಚಿವರ ವಸೂಲಿಗೆ ಬೆಸತ್ತ ಅಧಿಕಾರಿಗಳು ನಮ್ಮೆದುರು ಬಂದು ಕಣ್ಣೀರು ಹಾಕುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಅಂತಾ ಎಲ್ಲಾ ಇಲಾಖೆಗಳ ಸಚಿವರು ವಸೂಲಿ ಮಾಡಿ ಬಿಹಾರ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ ಇದೊಂದು ದಂಧೆಯಾಗಿದೆ. ಅದು ಬಿಹಾರಕ್ಕೆ ತಲುಪಲ್ಲ. ಅದು ಎಲ್ಲಿ ತಲುಪಬೇಕೋ ಅಲ್ಲಿ ತಲುಪತ್ತದೆ ಎಂದು ಆರೋಪಿಸಿದ್ದಾರೆ.