ಬೆಳಗಾವಿ: ನಮಗೆ ಡಿಸಿಸಿ ಬ್ಯಾಂಕಿನ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿದೆ. 29 ವರ್ಷಗಳ ನಂತರ ಪೂರ್ಣ ಪ್ರಮಾಣದ ಅಧಿಕಾರ ದೊರೆತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಹಾಜನತೆಗೆ, ರೈತರಿಗೆ, ಶಾಸಕರಿಗೆ ಧನ್ಯವಾದಗಳು. ನಾವು ಇದ್ದರೇನೇ ಡಿಸಿಸಿ ಬ್ಯಾಂಕ್ ಎನ್ನುತ್ತಿದ್ದವರಿಗೆ ಉತ್ತರ ಕೊಡುತ್ತೇವೆ. ಡಿಸಿಸಿ ಬ್ಯಾಂಕ್ ಅನ್ನು ಸದೃಢಗೊಳಿಸಿ ನಾವು ಉತ್ತರ ನೀಡುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
4 ಸ್ಥಾನಗಳಲ್ಲಿ ಗೆಲುವು
ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ 7 ಸ್ಥಾನಗಳ ಪೈಕಿ 4 ಸ್ಥಾನಗಳಲ್ಲಿ ನಾವು ಜಯ ಸಾಧಿಸಿದ್ದೇವೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ರಾಮದುರ್ಗ, ಹುಕ್ಕೇರಿಯಲ್ಲಿ ಸೋತಿದ್ದೇವೆ. ಮೊದಲೇ ಹೇಳಿದ ಹಾಗೆಯೇ ನಾವು ಗೆದ್ದಿದ್ದೇವೆ. ಗೆಲ್ಲುವುದಿಲ್ಲ ಎಂದು ಗೊತ್ತಿದ್ದರೂ ಅಪಪ್ರಚಾರ ಮಾಡಿದರು. ಆದರೆ ಅದು ಯಾವುದೂ ಕೂಡ ವರ್ಕೌಟ್ ಆಗಿಲ್ಲ. ಜಾತಿ ಟ್ರಂಪ್ ಕಾರ್ಡ್ ವರ್ಕೌಟ್ ಆಗಿಲ್ಲ. ಜನ ಉತ್ತರ ನೀಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.