HomeLatest Newsಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಒಂದು ವಾರ ಭಾರಿ ಮಳೆ ಮುನ್ಸೂಚನೆ | Rain Alert

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಒಂದು ವಾರ ಭಾರಿ ಮಳೆ ಮುನ್ಸೂಚನೆ | Rain Alert

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ವಿವಿಧೆಡೆ ಸೋಮವಾರದಿಂದ ಒಂದು ವಾರ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಕೋಲಾರ ಜಿಲ್ಲೆಯ ಕೆಲವೆಡೆ ಗಂಟೆಗೆ 30 ಕಿ.ಮೀ.ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಸೋಮವಾರದಿಂದ ಗುರುವಾರದವರೆಗೆ ಕರಾವಳಿಯಲ್ಲಿ 55 ಕಿ.ಮೀ.ವೇಗದವರೆಗೂ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಅಕ್ಟೋಬರ್ 26 ರ ವರೆಗೂ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳವಾರದಿಂದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆ ವ್ಯಾಪಿಸಿಕೊಳ್ಳುವ ಸಂಭವವಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular