ಚನ್ನಪಟ್ಟಣ : ನೀರಿನ ಟಬ್ ಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ. ಶಂಷಾದ್ ಪಠಾಣ್ ಹಾಗೂ ಮುಸ್ಕಾನ್ ದಂಪತಿಗಳ ನಾಲ್ಕನೇ ಪುತ್ರಿ ಖುಷಿ ಎಂದು ಗುರುತಿಸಲಾಗಿದೆ.
ಮನೆ ಒರೆಸಲು ಸಲುವಾಗಿ ಟಬ್ ಗೆ ನೀರು ತುಂಬಿಸಿ ಇಡಲಾಗಿತ್ತು. ಈ ವೇಳೆ ತಂದೆ-ತಾಯಿ ಯಾವುದೋ ಕೆಲಸದಲ್ಲಿ ಬ್ಯುಸಿ ಆಗಿದ್ದಾಗ ಆಟವಾಡುತ್ತಿದ್ದ ಖುಷಿ ಟಬ್ ಒಳಗೆ ಬಿದ್ದಿದ್ದಾಳೆ. ಕೂಡಲೇ ಮಗುವಿಗೆ ಪ್ರಜ್ಞೆ ತಪ್ಪಿದೆ. ಇದರಿಂದ ಭಯಗೊಂಡ ಪೋಷಕರು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿದೆ . ಇನ್ನೂ ನಡೆಯಲು ಕೂಡ ಕಲಿತಿರದ ಪುಟ್ಟ ಮಗುವಿನ ಕುಟುಂಬಕ್ಕೆ ಆಘಾತ ನೀಡಿದೆ. ಈ ಸಂಬಂಧ ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.