ನವದೆಹಲಿ : ದೇಶದ ಜನತೆಗೆ ಪ್ರಧಾನಿ ಮೋದಿ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಮೋದಿ ಜನತೆಗೆ ಹಬ್ಬದ ಶುಭಾಶಯ ಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು ‘’ನನ್ನ ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಬೆಳಕಿನ ಹಬ್ಬವು ಎಲ್ಲರ ಜೀವನವನ್ನು ಸಂತೋಷ, ಸಮೃದ್ಧಿ ಮತ್ತು ಸಾಮರಸ್ಯದಿಂದ ಬೆಳಗಿಸಲಿ ಎಂದು ಶುಭಾಶಯ ಕೋರಿದ್ದಾರೆ.

