HomeLatest News'ಆಯುಷ್ಮಾನ್' ಫಲಾನುಭವಿಗಳಿಗೆ 'ಯಶಸ್ವಿನಿ' ಯೋಜನೆಯಲ್ಲೇ ಪ್ರಯೋಜನ ಪಡೆಯಲು ಆದೇಶ

‘ಆಯುಷ್ಮಾನ್’ ಫಲಾನುಭವಿಗಳಿಗೆ ‘ಯಶಸ್ವಿನಿ’ ಯೋಜನೆಯಲ್ಲೇ ಪ್ರಯೋಜನ ಪಡೆಯಲು ಆದೇಶ

‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನ ಪಡೆಯಲು ಸೂಕ್ತ ಹಿಂಬರಹ ನೀಡಬಹುದು. ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ರೆಫರಲ್ ನೀಡುವ ಹಂತದಲ್ಲಿ ಈ ಹಿಂಬರಹ ನೀಡಬಹುದಾಗಿದೆ ಎಂದು ಆರೋಗ್ಯ ಇಲಾಖೆ ಆದೇಶಿಸಿದೆ.

ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯ ಇರುವುದರಿಂದ ಇವುಗಳ ಬಳಕೆ ಅವಕಾಶದಿಂದ ಯಶಸ್ವಿನಿ ಯೋಜನೆ ಫಲಾನುಭವಿಗಳು ವಂಚಿತವಾಗಬಾರದು. ಹೀಗಾಗಿ ಇದನ್ನು ಮನಗಂಡು ಯಶಸ್ವಿನಿ ಯೋಜನೆ ಫಲಾನುಭವಿಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ನೀಡಿರುವ ಅನುಮತಿ ಮುಂದುವರೆಯಲಿದೆ. ಆದರೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಡ್ಡಾಯವಾಗಿ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಗೆ ಹಂಚಿಕೊಳ್ಳಬೇಕು. ಆರೋಗ್ಯ ಇಲಾಖೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ದರದಲ್ಲಿ ಚಿಕಿತ್ಸಾ ವೆಚ್ಚ ಮರುಪಾವತಿಸಲು ಕ್ಲೇಮ್ ಸಲ್ಲಿಸಬೇಕು. ಯಶಸ್ವಿನಿ ಕಾರ್ಡ್ ದಾರರಿಗೆ ಹಿಂಬರಹ ಕೊಡಲು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular