HomeLatest Newsಕಬಡ್ಡಿ ಪಂದ್ಯದಲ್ಲಿ ಬಾಜಿ ಕಟ್ಟಿ ಹಣ ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್

ಕಬಡ್ಡಿ ಪಂದ್ಯದಲ್ಲಿ ಬಾಜಿ ಕಟ್ಟಿ ಹಣ ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್

ತುಮಕೂರು: ಕಬ್ಬಡಿ ಪಂದ್ಯದಲ್ಲಿ ಬಾಜಿ ಕಟ್ಟಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಹಣ ಕಳೆದುಕೊಂಡಿದ್ದಾರೆ. ಪಂದ್ಯದಲ್ಲಿ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜೊತೆಗೆ ಬಾಜಿ ಕಟ್ಟಿದ್ದ ಸಚಿವ ಪರಮೇಶ್ವರ್ 500 ರೂ. ಕಳೆದುಕೊಂಡಿದ್ದಾರೆ.

ತುಮಕೂರಿನಲ್ಲಿ ಭಾನುವಾರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ ನಡೆದಿದೆ. ಬಾಲಕರ ವಿಭಾಗದ ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ಮತ್ತು ವಿಜಯಪುರ ತಂಡಗಳು ಮುಖಾಮುಖಿಯಾಗಿವೆ. ದಕ್ಷಿಣ ಕನ್ನಡ ತಂಡ 36- 26 ಅಂಕಗಳಿಂದ ವಿಜಯಪುರ ತಂಡದ ವಿರುದ್ಧ ಜಯಗಳಿಸಿದೆ.

ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸಿ ಮಾತನಾಡಿದ ಪರಮೇಶ್ವರ್, ನಾನು ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜೊತೆಗೆ ಬೆಟ್ಟಿಂಗ್ ಮಾಡಿಕೊಂಡಿದ್ದೆ. 500 ರೂ. ಕಳೆದುಕೊಂಡುಬಿಟ್ಟೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular