ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯದ ವೇಳೆ ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಶರಣಪ್ಪ ಯಮನಪ್ಪ ಚಲವಾದಿ ಶನಿವಾರ ಮೃತಪಟ್ಟಿದ್ದಾರೆ.
ಬೀಳಗಿ ತಾಲೂಕಿನ ಬೂದಿಹಾಳ ಎಸ್ಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾಗಿದ್ದ ಶರಣಪ್ಪ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದರು. ಅಕ್ಟೋಬರ್ 9ರಂದು ಸಮೀಕ್ಷಾ ಕಾರ್ಯದ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದ್ದು. ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಮೃತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡುವಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.