HomeLatest NewsBIG NEWS: ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾಸನ: ಹಾಸನಾಂಬೆ ದರ್ಶನ ಪಡೆದು ವಾಪಸ್ ತೆರಳುತ್ತಿದ್ದಾಗ ಬೈಕ್ ಹಾಗೂ ಕಾರುಗಳಿಗೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಗ್ರಾಮದಲ್ಲಿ ನಡೆದಿದೆ.

ಎರಡು ಬೈಕ್ ಗಳು ಹಾಗೂ ಇನ್ನೋವಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತ ಬಸವರಾಜ್ ಬೈಕ್ ನಲ್ಲಿ ಅನು (19 ಹಾಗೂ ಛಾಯಾ (20 ಎಂಬ ಇಬ್ಬರು ಬೆಂಗಳೂರಿನಿಂದ ಬಂದಿದರು. ಹಾಸನಾಂಬೆ ದರ್ಶನ ಮುಗಿಸಿಕೊಂಡು ಮೂವರು ಒಂದೇ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣಕಡೆಯಿಂದ ಬರುತ್ತಿದ್ದ ಕಾರಿಗೆ ಆಕ್ಟೀವಾ ಡಿಕ್ಕಿಯಾಗಿದ್ದು, ಬಳಿಕ ಬೈಕ್ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಬಸವರಾಜ್ ಹಾಗೂ ಅನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಛಾಯಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular