ಬಾಗಲಕೋಟೆ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು, ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ವಿಜ್ವನಾಥ್ ಹನುಮಂತಪ್ಪ ಮೃತ ಯುವಕ. ಅ.16ರಂದು ಎರಡು ಕುಟುಂಬಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ಗಣೇಶ್ ಮರೆಮ್ಮನವರ್, ಪ್ರಕಾಶ್, ರಂಗಪ್ಪ, ಕುಮಾರ್, ಯಲ್ಲಪ್ಪ, ಬಸಪ್ಪ, ಯಂಕಪ್ಪ ಎಂಬುವವರು ವಿಶ್ವನಾಥ್ ಮೇಲೆ ರಾಡ್ ನಿಂದ ಹಲ್ಲೆ ನಡೆದಿದ್ದರು.
ಗಂಭೀರವಾಗಿ ಹಲ್ಲೆಗೊಳಗಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕ ಕೊನೆಗೂ ಚಿಕಿತ್ಸೆ ಫಲಿಸದೇ ಸಾವನ್ನಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಕಖೆ ನಡೆಸಿದ್ದಾರೆ.