ನೆಲಮಂಗಲ: ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ನೆಲಮಂಗಲದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಘಟನ ಅಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.