HomeLatest NewsBREAKING: ಪಿವಿಸಿ ಪೈಪ್ ನಿಂದ ವಿದ್ಯಾರ್ಥಿಗೆ ಬಾಸುಂಡೆ ಬರುಂತೆ ಹಲ್ಲೆ: ಪ್ರಾಂಶುಪಾಲ, ಶಿಕ್ಷಕಿ ವಿರುದ್ಧ FIR...

BREAKING: ಪಿವಿಸಿ ಪೈಪ್ ನಿಂದ ವಿದ್ಯಾರ್ಥಿಗೆ ಬಾಸುಂಡೆ ಬರುಂತೆ ಹಲ್ಲೆ: ಪ್ರಾಂಶುಪಾಲ, ಶಿಕ್ಷಕಿ ವಿರುದ್ಧ FIR ದಾಖಲು

ಬೆಂಗಳೂರು: ಎರಡು ದಿನ ವಿದ್ಯಾರ್ಥಿ ಶಾಲೆಗೆ ಗೈರಾಗಿದ್ದಕ್ಕೆ ಶಾಲೆಯ ಶಿಕ್ಷಕಿ ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸುಂಕದಕಟ್ಟೆ ಬಳಿ ಇರುವ ಪ್ರತಿಷ್ಠ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ಎರಡು ದಿನ ಶಾಲೆಗೆ ಬಂದಿರಲಿಲ್ಲ. ಮಾರನೆ ದಿನ ಶಾಲೆಗೆ ಹೋಗುತ್ತಿದ್ದಂತೆ ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿದ್ಯಾರ್ಥಿಯನ್ನು ಪಿವಿಸಿ ಪೈಪ್ ನಿಂದ ಹೊಡೆದಿದ್ದು, ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ವಿದ್ಯಾರ್ಥಿಯ ತಾಯಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತನ್ನ ಮಗನಿಗೆ ಏನಾದರೂ ಆದರೆ ಶಿಕ್ಷಕಿ ಹಾಗೂ ಪ್ರಾಂಶುಪಾಲರ ವಿರುದ್ಧ ಕಾನೂನು ಹೋರಾಟ ತೀವ್ರಗೊಳಿಸುವುದಾಗಿ ವಿದ್ಯಾರ್ಥಿ ತಾಯಿ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular