ತೆಲಂಗಾಣ : ಇಬ್ಬರು ಮಕ್ಕಳ ಜೊತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಕೊಂಡಮಲ್ಲೇಪಲ್ಲಿಯಲ್ಲಿ ನಡೆದಿದೆ.
ತನ್ನ ಇಬ್ಬರು ಮಕ್ಕಳನ್ನು ಕೊಂದ ತಾಯಿ ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಘಟನೆ ಸ್ಥಳಕ್ಕೆ ತಲುಪಿದ್ದಾರೆ.
ಮೃತರನ್ನು ಕುಂಚಾಳ ನಾಗಲಕ್ಷ್ಮಿ (27), ಭುವನ್ ಸಾಯಿ (7), ಅವಂತಿಕ (9) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You Might Also Like
TAGGED:ನೇಣು