ಬೆಂಗಳೂರು: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಡಗರ ಮನೆ ಮಾಡಿದೆ. ಬೆಳಕಿನ ಹಬ್ಬದ ಸಂಭ್ರಮದಲ್ಲಿ ಪಟಾಕಿ ಶಬ್ಧಗಳು ಜೋರಾಗಿವೆ. ಹಬ್ಬದ ಸಡಗರದಲ್ಲಿ ಪಟಾಕಿ ಸಿಡಿಸಲು ಹೋಗಿ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮನೆಯ ಬಳಿ ಪಟಾಕಿ ಸಿಡಿಸುತ್ತಿರುವುದನ್ನು ನೋಡುತ್ತಾ ನಿಂತಿದ್ದ ಮಕ್ಕಳು ಗಾಯಗೊಂಡಿದಾರೆ. ಮೂವರು ಮಕ್ಕಳಿಗೆ ಪಟಾಕಿ ಸಿಡಿದು ಗಾಯಗಳಾಗಿದ್ದು, ನಾರಾಯಣ ನೇತ್ರಾಲಯಕ್ಕೆ ದಾಖಲಿಸಲಾಗಿದೆ.
ಮೂವರು 15 ವರ್ಷದ ಮಕ್ಕಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಮಕ್ಕಳ ಬಗ್ಗೆ ಪೋಷಕರು ನಿಗಾ ವಹಿಸುವಂತೆ ಹಾಗೂ ಪಟಾಕಿ ಸಿಡಿಸುವಾಗ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.