ನೆಲಮಂಗಲ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತಟ್ಟಿಕೆರೆ ಗ್ರಾಮದ ತೋಟದ ಮನೆಯಲ್ಲಿ ಘಟನೆ ನಡೆದಿದೆ.
ಹೊನ್ನೆನಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ವೀರಭದ್ರಸ್ವಾಮಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಎಡಗೈ ಮತ್ತು ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಹೊನ್ನೆನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ. ಸುರೇಶ್ ಹಾಗೂ ಶಿವಕುಮಾರ್ ಎಂಬುವರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ.
ಚಾಕುವಿನಿಂದ ಇರಿದ ಕೂಡಲೇ ವೀರಭದ್ರಸ್ವಾಮಿ ತಪ್ಪಿಸಿಕೊಂಡಿದ್ದಾರೆ. ಓಡಿಹೋಗಿ ಪ್ರಾಣ ಉಳಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಬಸ್ ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ ನಂತರ ತುಮಕೂರು ಆಸ್ಪತ್ರೆಗೆ ವೀರಭದ್ರಸ್ವಾಮಿಯವರನ್ನು ದಾಖಲಿಸಲಾಗಿದೆ.