ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಮಲತಂದೆ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಪ್ರಕರಣ ಬೆಳಕಿಗೆ ಬಂದ ಬಳಿಕ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಾಸ್ತಿಕಟ್ಟೆಯ ಅಮೀರ್(40) ಬಂಧಿತ ಆರೋಪಿ. ಬಾಲಕಿ 7 ವರ್ಷದವಳಾಗಿದ್ದಾಗಿನಿಂದ ಹಿಡಿದು ಇದೀಗ 12 ವರ್ಷ ವಯಸ್ಸಿನವರೆಗೂ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಮರ್ಯಾದೆಗೆ ಹೆದರಿ ಮನೆಯವರು ದೂರು ದಾಖಲಿಸಿಲ್ಲ. ಇತ್ತೀಚೆಗೆ ಮಾನಸಿಕವಾಗಿ ನೊಂದಿದ್ದ ಬಾಲಕಿಯನ್ನು ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋದಾಗ ವೈದ್ಯರು ಪರಿಶೀಲಿಸಿದ ವೇಳೆ ಅತ್ಯಾಚಾರ ವಿಚಾರ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.