ಬೆಂಗಳೂರು : ಬಿಜೆಪಿ ಹೈಕಮಾಂಡ್ ‘ಗೆ 1800 ಕೋಟಿ ರೂ. ಕಪ್ಪ ನೀಡಿದ್ದನ್ನು ಮರೆತಿದ್ದೀರಾ..? ಎಂದು ಸಂಸದ ಬಿ.ವೈ ರಾಘವೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ”ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಶ್ರೀ ಯಡಿಯೂರಪ್ಪನವರು ಹಾಗೂ ದಿ. ಶ್ರೀ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು @BJP4Karnatakaನಾಯಕರು ಮರೆತಿದ್ದಾರೆಯೇ?
ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ. ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದಿದ್ದಾರೆ.
ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಶ್ರೀ ಯಡಿಯೂರಪ್ಪನವರು ಹಾಗೂ ದಿ. ಶ್ರೀ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು @BJP4Karnataka ನಾಯಕರು ಮರೆತಿದ್ದಾರೆಯೇ?
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 21, 2025
ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ.
ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ… pic.twitter.com/2q9NwXuDBs