ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಾಜ್ಯದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಬೀದರ್ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.
ಕಾರಿನಲ್ಲಿದ್ದ ಶಿವಕುಮಾರ್, ರತಿಕಾಂತ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರು ಬೀದರ್ ತಾಲೂಕಿನ ಖಾಶಂಪುರ ನಿವಾಸಿಗಳು. ಹಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಾಗ ಉಮ್ಮರ್ಗ ಬಳಿ ಈ ದುರಂತ ಸಂಭವಿಸಿದೆ.