HomeLatest Newsಸರಳ ವಿವಾಹ ಜೋಡಿಗೆ ಗುಡ್ ನ್ಯೂಸ್: 50 ಸಾವಿರ ರೂ. ಪ್ರೋತ್ಸಾಹ ಧನಕ್ಕೆ ಅರ್ಜಿ

ಸರಳ ವಿವಾಹ ಜೋಡಿಗೆ ಗುಡ್ ನ್ಯೂಸ್: 50 ಸಾವಿರ ರೂ. ಪ್ರೋತ್ಸಾಹ ಧನಕ್ಕೆ ಅರ್ಜಿ

ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50 ಸಾವಿರ ನೀಡುವ ಕಾರ್ಯಕ್ರಮವನ್ನು ನಿರ್ದೇಶನಾಲಯದಿಂದ ಅನುಷ್ಠಾನಗೊಳಿಸಲಾಗಿದೆ.

ಷರತ್ತುಗಳು:

ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ(ಮುಸ್ಲಿಂ, ಕ್ರಿಶ್ಚಿಯನ್, ಜೈನ್ ಸಿಖ್, ಬೌದ್ಧ ಮತ್ತು ಪಾರ್ಸಿ) ಸೇರಿದವರಾಗಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು, ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ. 2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ. 5 ಲಕ್ಷಗಳನ್ನು ಮೀರತಕ್ಕದ್ದಲ್ಲ.

ಈ ಸೌಲಭ್ಯವು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡತಕ್ಕದ್ದು.

ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು ದೇವಸ್ಥಾನದ ಟ್ರಸ್ಟ್ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

 ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂರ್ಪಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂರ್ಪಿಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular