ದುನಿಯಾ ಡಿಜಿಟಲ್ ಡೆಸ್ಕ್ : ರಾಜ್ಯದ ಈ 2 ಸ್ಥಳದಲ್ಲಿ 200 ವರ್ಷಗಳಿಂದ ದೀಪಾವಳಿ ಹಬ್ಬ ಆಚರಿಸಲ್ಲ.! ಹೌದು. ಸುಮಾರು 200 ವರ್ಷದಿಂದ ಈ ಊರಿನ ಜನ ದೀಪಾವಳಿ ಹಬ್ಬ ಆಚರಿಸಿಲ್ಲ.
ದಾವಣಗೆರೆ ಜಿಲ್ಲೆಯ ಲೋಕಿಕೆರೆ ಗ್ರಾಮದ ಶೇ. 70ರಷ್ಟು ಕುಟುಂಬಗಳು ಮತ್ತು ಮಂಡ್ಯ ಜಿಲ್ಲೆಯ ಮೇಲುಕೋಟೆ ಪಟ್ಟಣದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವುದಿಲ್ಲ. ಲೋಕಿಕೆರೆ ಗ್ರಾಮದಲ್ಲಿ ಸುಮಾರು ಎರಡು ಶತಮಾನಗಳಿಂದಲೂ ಹಬ್ಬವನ್ನು ಸೂತಕವೆಂದು ಪರಿಗಣಿಸಲಾಗುತ್ತಿದೆ, ಏಕೆಂದರೆ ಹಬ್ಬದ ಸಮಯದಲ್ಲಿ ಯುವಕರು ಕಾಡಿಗೆ ಹೋಗಿ ಹಿಂತಿರುಗಿ ಬಾರದ ಘಟನೆ ನಡೆದಿದೆ. ಮೇಲುಕೋಟೆಯಲ್ಲಿ, ಸುಮಾರು 200 ವರ್ಷಗಳಿಂದ ದೀಪಾವಳಿ ಆಚರಣೆಯನ್ನು ನಿಲ್ಲಿಸಲಾಗಿದೆ.
* ಲೋಕಿಕೆರೆ ಗ್ರಾಮ (ದಾವಣಗೆರೆ ಜಿಲ್ಲೆ):
ಸುಮಾರು ಎರಡು ಶತಮಾನಗಳಿಂದ ದೀಪಾವಳಿಯನ್ನು ಆಚರಿಸುವುದಿಲ್ಲ. ಶೇ. 70ರಷ್ಟು ಕುಟುಂಬಗಳು ಹಬ್ಬವನ್ನು ಸೂತಕವೆಂದು ಪರಿಗಣಿಸುತ್ತವೆ.
*ಮೇಲುಕೋಟೆ (ಮಂಡ್ಯ ಜಿಲ್ಲೆ):
ಸುಮಾರು 200 ವರ್ಷಗಳಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿಲ್ಲ. ಕಾರಣ, ಈ ಸ್ಥಳವು ಶ್ರೀ ವೈಷ್ಣವ ಸಂತ ರಾಮಾನುಜಾಚಾರ್ಯರ ನೆಲೆವೀಡಾಗಿತ್ತು ಮತ್ತು ಈ ಆಚರಣೆಯನ್ನು ನಿಲ್ಲಿಸಲಾಗಿದೆ.
ದೀಪಾವಳಿ
(ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ.
ಹಿಂದೂ ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದಿ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ. ಉತ್ತರ ಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.