ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಗಿದ ಬೆನ್ನಲ್ಲೇ ಹಿಂಗಾರು ಮಳೆ ಆರಂಭವಾಗಿದೆ. ಹೌದು. ಹಿಂಗಾರು ಮಳೆ ಚುರುಕಾದ ಹಿನ್ನೆಲೆ ಮುಂದಿನ 1 ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 1 ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಸೈಕ್ಲೋನ್ ಆಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವ ಇದೆ. ಅಕ್ಟೋಬರ್ 22ರಿಂದ 27ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಭಾರಿ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳವಾರದಂದು ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದೆ.