ನವದೆಹಲಿ : ಚಾಲಕನೋರ್ವ ತಂದೆ ಮೇಲಿನ ಸೇಡಿಗೆ ಮಗನನ್ನು ಕಿಡ್ನ್ಯಾಪ್ ಮಾಡಿ ಹತ್ಯೆಗೈದ ಘಟನೆ ದೆಹಲಿಯ ನರೇಲಾ ಪ್ರದೇಶದಲ್ಲಿ ನಡೆದಿದೆ.
ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಮಾಲೀಕನ ಮಗನಿಗೆ ಇಟ್ಟಿಗೆ ಮತ್ತು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಇದು ಸೇಡಿನ ಕೃತ್ಯ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣದ ಆರೋಪಿ ನೀತು ಬಾಡಿಗೆ ಮನೆಯಿಂದ ಶವವನ್ನು ವಶಪಡಿಸಿಕೊಳ್ಳಲಾಗಿದೆ .
ಸದ್ಯ ಆರೋಪಿ ನೀತು ಪರಾರಿಯಾಗಿದ್ದು, ಅವನನ್ನು ಪತ್ತೆಹಚ್ಚಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರು ಅವನನ್ನು ಹುಡುಕಲು ಪ್ರಾರಂಭಿಸಿದ್ದಾರೆ ನಂತರ ನೀತುವಿನ ಹತ್ತಿರದ ಬಾಡಿಗೆ ಕೋಣೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
ನೀತುವಿನ ಕೆಟ್ಟ ವರ್ತನೆಗಾಗಿ ಮಾಲೀಕ ಈ ಹಿಂದೆ ಎರಡರಿಂದ ನಾಲ್ಕು ಬಾರಿ ಕಪಾಳಮೋಕ್ಷ ಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸೇಡು ತೀರಿಸಿಕೊಳ್ಳಲು, ನೀತು ಮಂಗಳವಾರ ಬಾಲಕ ಮನೆಯ ಹೊರಗೆ ಆಟವಾಡುತ್ತಿದ್ದಾಗ ಅವನನ್ನು ಅಪಹರಿಸಿ, ತನ್ನ ಬಾಡಿಗೆ ಮನೆಗೆ ಕರೆದೊಯ್ದು, ಇಟ್ಟಿಗೆ ಮತ್ತು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ ಎಂದು ಡಿಸಿಪಿ ತಿಳಿಸಿದ್ದಾರೆ.